ಜಿಲ್ಲೆ

ಖಾಸಗಿ ಕಾಲೇಜು ಮಾನ್ಯತೆ ವಿರೋಧಿಸಿ ಪ್ರತಿಭಟನೆ

ಬಳ್ಳಾರಿ : ಖಾಸಗಿ ಕಾಲೇಜುಗಳಿಗೆ ಮಾನ್ಯತೆ ನೀಡುವ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ನಡೆ ವಿರೋಧಿಸಿ ತಾಲೂಕಿನ ಹಗರಿ ಕೃಷಿ ವಿಜ್ಞಾನ ಕೇಂದ್ರದ ಆವರಣದ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟಿಸಿದರು.
ಕೃಷಿ ವಿಜ್ಞಾನ ವಿದ್ಯಾಲಯ ಬೆಂಗಳೂರಿನ ಖಾಸಗಿ ಕಾಲೇಜುಯೊಂದಕ್ಕೆ ಅನುಮತಿ ನೀಡಲು ಮುಂದಾಗಿದ್ದು, ಇದು ಕೃಷಿ ವಿದ್ಯಾರ್ಥಿಗಳಿಗೆ ಭವಿಷ್ಯದ ಪ್ರಶ್ನೆಯಾಗಿದೆ. ನೂರರು ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಿರುವ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಕೃಷಿ ಶಿಕ್ಷಣದ ಗುಣಮಟ್ಟ ಚಿಂತಜನಕವಾಗಿದೆ. ತರಾತುರಿಯಲ್ಲಿ ಖಾಸಗಿ ಕೃಷಿ ಕಾಲೇಜುಗಳನ್ನು ಸ್ಥಾಪಿಸಲು ಹೊರಡಿರುವುದು ವಿದ್ಯಾರ್ಥಿವರ್ಗ ಮತ್ತು ಕೃಷಿ ಪದವೀಧರರಿಗೆ ಮಾಡುತ್ತಿರುವ ಅತಿದೊಡ್ಡ ವಂಚನೆಯಾಗಿದೆ. ಇದಕ್ಕೆ ಸರ್ಕಾರದ ಮಟ್ಟದಲ್ಲಿಯೂ ಉನ್ನತ ಅಧಿಕಾರಿಗಳು ಶಾಮೀಲು ಆಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ವಿದ್ಯಾರ್ಥಿಗಳ ಪರ ನಿಂತು ಯಾವುದೇ ಕಾರಣಕ್ಕೂ ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಬಾರದೆಂದು ಪ್ರತಿಭಟನ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಾದ್ವಿಕ್, ಚರಣ್, ವಿನಯ, ಮನೋಜ, ಆಕಾಶ್ ಹಾಗೂ ಇತರ ವಿದ್ಯಾರ್ಥಿಗಳು ಇದ್ದರು.