ಕೊಳ್ಳೇಗಾಲ: ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಬಳಿ ಅತೀ ವೇಗವಾಗಿ ಖಾಸಗಿ ಬಸ್ ಚಲಾಯಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪೊಲೀಸರು ಬಸ್ ವಶಕ್ಕೆ ಪಡೆದು ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ.
ಶ್ರೀ ಮಹದೇಶ್ವರ ಎಸ್‌ಎಂಎಂಎಸ್ ಹೆಸರಿನ ಖಾಸಗಿ ಬಸ್ ಸೆ.21 ರಂದು ಕೊಳ್ಳೇಗಾಲದಿಂದ ಹನೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ದೊಡ್ಡಿಂದುವಾಡಿ ಹತ್ತಿರ ಚಾಲಕ ಅತಿ ವೇಗದಲ್ಲಿ ಬಸ್ ಚಲಾಯಿಸುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಬಸ್ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಸಂಚಾರ ನಿಯಮ ಉಲ್ಲಂಘನೆಯಡಿ ಪ್ರಕರಣ ದಾಖಲಿಸಿ ಚಾಲಕನ ಪತ್ತೆಗೆ ಕ್ರಮವಹಿಸಿದ್ದಾರೆ.