ಜಿಲ್ಲೆ

ಗಂಗಾ ಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾಪನೆ

ಆಲೂರು:  ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ದೇವಸ್ಥಾನ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವು ಸಂಭ್ರಮದಿಂದ ನೆರವೇರಿತು.ಉದ್ಘಾಟನೆ ಅಂಗವಾಗಿ 

ದೇವಾಲಯದ ಆವರಣದಲ್ಲಿ ವಿವಿಧ ಹೋಳುಗಳು ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಎಲ್ಲಾ ಭಕ್ತರಿಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಶಾಸಕ ಹೆಚ್.ಕೆ. ಕುಮಾರಸ್ವಾಮಿ ಮಾತನಾಡಿ, ಗ್ರಾಮದ ಜನರು ಹೊಂದಾಣಿಕೆ, ಪ್ರೀತಿ ವಿಶ್ವಾಸದಿಂದ ಬದುಕಬೇಕು. ಮಕ್ಕಳು ವಿದ್ಯಾವಂತರಾಗುವ ಜತೆಗೆ ಸಂಸ್ಕಾರವಂತರಾಗಬೇಕು ಎಂದರು.

ಸಣ್ಣ ಸಣ್ಣ ಸಮಾಜಗಳಿಗೆ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಸರ್ಕಾರ ಗಂಗಾಮತಸ್ಥ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸ ಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಎ.ಪಿ.ಎಂ.ಸಿ ಅಧ್ಯಕ್ಷ ಕೆ ಎಸ್ ಮಂಜೇಗೌಡ, ದೇವಾಲಯ ನಿರ್ಮಾಣಕ್ಕೆ ಗ್ರಾಮದ ಪ್ರತಿಯೊಬ್ಬರೂ ಪಕ್ಷಭೇದ ಮರೆತು ಒಗ್ಗಟಾಗಿ ಸಹಕಾರ ನೀಡಿದ್ದಾರೆ. ಸುಮಾರು ಹತ್ತಾರು ವರ್ಷಗಳ ಕಾಲದಿಂದ ಹಿರಿಯರು ಪೂಜೆ ನಡೆಸಿಕೊಂಡು ಬರುತ್ತಿದ್ದ ದೇವಾಲಯ ಇದಾಗಿದೆ ಎಂದರು.

ಈ ಸಂದರ್ಭದಲ್ಲಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಯಾಣ್ ಕುಮಾರ್, ಮಾಜಿ ಅಧ್ಯಕ್ಷ ಪ್ರಕಾಶ್‌, ಸದಸ್ಯ ಬೀರೇಗೌಡ, ತಾ ಪಂ ಮಾಜಿ ಸದಸ್ಯ ಸಿ ಎ ಲಿಂಗರಾಜ್, ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಪಿ ಎಲ್ ನಿಂಗರಾಜ್, ಜಿಲ್ಲಾ ಗಂಗಾಮತಸ್ಥ ಸಮಾಜದ ಸ೦ಘಟನಾ ಕಾರ್ಯದರ್ಶಿ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಮಧುಸೂದನ್, ಜಿಲ್ಲಾ ಖಜಾಂಚಿ ಪಾಪಣ್ಣ, ತಾಲೂಕು ಅಧ್ಯಕ್ಷ ಪುರುಷೋತ್ತಮ್, ಕರವೇ ಜಿಲ್ಲಾ ಉಪಾಧ್ಯಕ್ಷ ರಘು ಪಾಳ್ಯ,  ಸೇರಿದಂತೆ ಗಂಗಾಮತಸ ಜನಾಂಗದವರು ಹಾಜರಿದ್ದರು.