ಚಾಮರಾಜನಗರ: ತಾಲೂಕಿನ ಚಿಕ್ಕಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ತಮಿಳು ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕನ್ನಡ ಶಿಕ್ಷಕಿ ಶ್ವೇತಾ ಅವರನ್ನು ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಗಡಿನಾಡ ಕನ್ನಡ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಕೆಂಪನಪುರ ಮಹದೇವಸ್ವಾಮಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಚಂದಕವಾಡಿ ಹೋಬಳಿ ಘಟಕದ ಅಧ್ಯಕ್ಷ ಮಂಜುನಾಥ್, ಜೋಸೆಫ್, ಎಚ್.ಎಂ. ಶಿವಣ್ಣ ಮಂಗಲ ಹೊಸೂರು, ಗ್ರಾ.ಪಂ. ಸದಸ್ಯ ರಾಜೇಶ್ವರಿ, ಮೂರ್ತಿ ಹಾಗೂ ಇತರರು ಹಾಜರಿದ್ದರು.