ಚಾಮರಾಜನಗರ: ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಅವರಣದ ಮಾರಿ ಗುಡಿ ಮುಂಭಾಗ ಹಿಂದೂ ಜಾಗೃತಿ ಸಮಿತಿ ಹಾಗೂ ಮುದುಕು ಮಾರಮ್ಮ ಯುವಕರ ಸಂಘದಿಂದ ಪ್ರತಿಷ್ಠಾಪಿಸಿರುವ ಗಣಪತಿ ವಿಸರ್ಜನೆಯು ಗುರುವಾರ ನಡೆಯಲಿದ್ದು, ಬುಧವಾರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವಿನಿಯೋಗ ನಡೆಸಲಾಯಿತು.
ಭವ್ಯ ವೇದಿಕೆಯಲ್ಲಿ ಪ್ರತಿಷ್ಠಾಪಿಸಿರುವ ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರಸಭಾ ಅಧ್ಯಕ್ಷ ಸುರೇಶ್ ಮಾತನಾಡಿ, ಹಿಂದೂ ಧರ್ಮದಲ್ಲಿ ಜನರು ಅತಿ ಹೆಚ್ಚು ಪೂಜಿಸಲಾಗುವ ದೇವರು ಮತ್ತು ದೇವತೆಗಳಲ್ಲಿ ಗಣೇಶನೂ ಒಬ್ಬನಾಗಿದ್ದಾನೆ. ಗಣೇಶನನ್ನು ಪ್ರತಿನಿತ್ಯವೂ ಪೂಜಿಸಲಾಗುತ್ತದೆಯಾದರೂ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಗಣೇಶನನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಎಂದರು
ಹಿಂದೂಗಳಾದ ನಾವು ಆಚರಿಸುವ ಅತ್ಯಂತ ಸಂಭ್ರಮ ಮತ್ತು ಸಡಗರದ ಹಬ್ಬಗಳಲ್ಲಿ ಗಣೇಶ ಚತುರ್ಥಿ ಹಬ್ಬ ಕೂಡ ಒಂದಾಗಿದೆ. ಗಣೇಶ ಚತುರ್ಥಿ ಹಬ್ಬವನ್ನು ಸುಮಾರು ದಿನಗಳ ಕಾಲ ಆಚರಿಸುವಂತಹ ಒಂದು ಪ್ರಮುಖವಾದ ಹಬ್ಬವಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಮಮತಾ ಬಾಲಸುಬ್ರಹ್ಮಣ್ಯಂ,ಜಾಗೃತಿ ಸಮಿತಿಯ ಶ್ರೀಕಂಠಸ್ವಾಮಿ, ನಟರಾಜ್, ಕೃಷ್ಣಕುಮಾರ್, ಬಾಲಸುಬ್ರಹ್ಮಣ್ಯಂ, ಪೋಟೋ ಕೃಷ್ಣ, ದರ್ಶನ್, ಮಂಜು ಪೈನಾಪಲ್, ಕೆ.ಟಿ. ನಾಗರಾಜ್ ಇತರರು ಹಾಜರಿದ್ದರು.