ಗದಗ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರನ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯರು ಹಾಗೂ ಜಿ.ಪಂ. ಸಿಇಓ.ಸುಶೀಲಾ ಬಿ ಸೂಚಿಸಿದರು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸೆಕ್ಟೆರ್ ಅಧಿಕಾರಿಗಳು, ಗ್ರಾಪಂ ಪಿಡಿಒ, ಬಿಎಲ್ಓ ಸಭೆಯ ಅಧ್ಯತೆ ವಹಿಸಿ ಮಾತನಾಡಿ, ಕಳೆದ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯ ಶೇಕಡಾವಾರು ಮತದಾನದ ಅಂಕಿ ಅಂಶಗಳನ್ನು ಪರಾರ್ಮಶಿಸಿ ಅತೀ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನು ಗುರುತಿಸಿ ಮತದಾನ ಕಡಿಮೆ ಆಗಿರುವದಕ್ಕೆ ನಿಖರ ಕಾರಣಗಳೊಂದಿಗೆ ಬಿಎಲ್ಓ ಗಳು ವರದಿ ನೀಡಬೇಕು. ಹಾಗೂ ಮತದಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು. ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದರು.
ರಾಜ್ಯದ ಒಟ್ಟಾರೆ ಶೇಕಡಾವಾರು ಮತದಾನಕ್ಕಿಂತ ಜಿಲ್ಲೆಯ ೇತ್ರವಾರು ಮತದಾನ ಅಧಿಕವಾಗಬೇಕು. ಮತದಾನದ ಮಹತ್ವ ಜನಸಾಮಾನ್ಯರಿಗೆ ತಿಳಿಸಿಕೊಡುವ ಮೂಲಕ ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಸಧೃಡ ಪ್ರಜಾಪ್ರಭುತ್ವ ನಿಮಿರ್ಸಲು ಮತದಾರರನ್ನು ಪ್ರೇರೆಪಿಸುವಂತಹ ಕಾರ್ಯವನ್ನು ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಶುಶಿಲಾ ನುಡಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಪಂಡಿತಾರಾಧ್ಯ ಮಾತನಾಡಿ, ಪ್ರತಿಯೊಬ್ಬರು ಮತದಾನದ ಮಹತ್ವ, ಪ್ರಕ್ರಿಯೆ ಹಾಗೂ ಮತದಾನದ ಜಾಗೃತಿ ಮೂಡಿಸುವಂತಹ ೂಷವಾಕ್ಯಗಳನ್ನು, ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಮತದಾರರಿಗೆ ತಮ್ಮ ಹಕ್ಕುಗಳನ್ನು ತಪ್ಪದೇ ಚಲಾಯಿಸಲು ಮುಂದಾಗುವಂತೆ ತಿಳಿಸಿದರು. ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೂಚಿಸದರು.
ತಹಸೀಲ್ದಾರ ಮಲ್ಲಿಕಾರ್ಜುನ ಮಾತನಾಡಿ, ಮತದಾನದ ಶೇಕಡಾವಾರು ಅಂಕಿ ಅಂಶಗಳನ್ನು ಗಮನಿಸಿದಾಗ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದ ಮತದಾರರು ಮತದಾನ ಮಾಡುವಲ್ಲಿ ನಿರಾಸಕ್ತಿ ವಹಿಸಿದ್ದಾರೆ. ಇದಕ್ಕೇ ಸೂಕ್ತ ಕಾರಣಗಳನ್ನು ಬಿಎಲ್ಓ ಗಳು ಕಂಡು ಹಿಡಿದು ಪ್ರಸಕ್ತ ವರ್ಷದ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ನಗರಸಭೆ ಪೌರಾಯುಕ್ತ ಗಂಗಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿಗಳು, ಸೆಕ್ಟೆರ್ ಅಧಿಕಾರಿಗಳು ಇದ್ದರು.
ಪ್ರಾತ್ಯಕ್ಷಿಕೆ
ಜಿಲ್ಲಾಡಳಿತ ಭವನ ಮುಖ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ವಿಧ್ಯುನ್ಮಾನ ಮತಯಂತ್ರದ ಪ್ರಾತ್ಯಕೆಯನ್ನು ಪ್ರಸ್ತುತ ಪಡಿಸಲಾಯಿತು. ವಿಧ್ಯುನ್ಮಾನ ಮತಯಂತ್ರ ಹಾಗೂ ವಿ.ವಿ.ಪ್ಯಾಟ ಯಂತ್ರಗಳ ಕಾರ್ಯವಿಧಾನ, ಮತ ಖಾತ್ರಿ ಕುರಿತು ಪ್ರಾತ್ಯಕ್ಷಿಕೆ ನೀಡಿದರು.