ಜಿಲ್ಲೆ

ಗದ್ದೆಗೆ ಬೆಂಕಿ, ಕಬ್ಬು ಸುಟ್ಟು ಭಸ್ಮ

ವಿಜಯಪುರ: ಜಮೀನಿನಲ್ಲಿರುವ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಗ್ರಾಮದಲ್ಲಿ ನಡೆದಿದೆ. ರೈತ ಸಾಹೇಬಗೌಡ ಕೊಪ್ಪಳ ಎಂಬುವವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 4 ಎಕರೆ ಕಬ್ಬು ಸುಟ್ಟು ಭಸ್ಮವಾಗಿದೆ. ಸುಮಾರು ಎಂಟು ಲಕ್ಷಕ್ಕೂ ಅಧಿಕ ಕಬ್ಬು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.