ಸುಂಟಿಕೊಪ್ಪ: ಸಮೀಪದ ಗರಗಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡಗು ಜಿಲ್ಲಾ ಶಿಕ್ಷಣ ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಆರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆರೋಗ್ಯ ಕಾರ್ಯಕರ್ತೆ ಗ್ರೀಷ್ಮಾ ಮಾತನಾಡಿ, ವೈಯಕ್ತಿಕ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಮಾದಾಪುರ ಕ್ಲಸ್ಟರ್ ಸಿಆರ್‌ಪಿ ಬಿಪಿನ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಲು ನಿತ್ಯವೂ ಪೌಷ್ಟಿಕ ಆಹಾರ ಸೇವಿಸಬೇಕು. ಯೋಗ ಅಥವಾ ವ್ಯಾಯಾಮ ಮಾಡಬೇಕು. ಇದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದರು.
ಸಿಎಚ್‌ಒ ರಫೀನಾ, ಪ್ರೇರಣಾ ಕಾರ್ಯಕ್ರಮ ಜಿಲ್ಲಾ ಸಂಯೋಜಕ ಶಿವಕುಮಾರ್, ಆಶಾ ಕಾರ್ಯಕರ್ತೆ ಚಿತ್ರಾ, ಪ್ರೇಮಾ ಮತ್ತಿತರರು ಇದ್ದರು.