ಬೆಟ್ಟದಪುರ ಸಮೀಪದ ಬೆಕ್ಕರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಠಿಕ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೌಮ್ಯಾ, ಜಗದೀಶ್, ರೂಪಾ, ಪಂಕಜಾ, ವಸುಂಧರಾ, ಸಿಂಧು, ದ್ರಾಕ್ಷಾಯಿಣಿ ಇದ್ದರು. 
ಜಿಲ್ಲೆ

ಆರೋಗ್ಯಕರ ಜೀವನಕ್ಕೆ ಸ್ವಚ್ಛತೆಯೇ ಅಸ್ತ್ರ

ಬೆಟ್ಟದಪುರ: ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಕಾಯಿಲೆಗಳು ಹತ್ತಿರಕ್ಕೂ ಸುಳಿಯುವುದಿಲ್ಲ ಎಂದು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯಾ ತಿಳಿಸಿದರು.

ಸಮೀಪದ ಬೆಕ್ಕರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ವಾಸಿಸುವ ಸ್ಥಳ ಹಾಗೂ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡಾಗ ಅನೈರ್ಮಲ್ಯ ಉಂಟಾಗುವುದಿಲ್ಲ. ಇದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದರು.

ನಿಂತ ನೀರು, ಸ್ವಚ್ಛ ಮಾಡದ ನೀರಿನ ಟ್ಯಾಂಕ್, ತೊಟ್ಟಿಗಳಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಕಾಯಿಲೆಗಳು ಹರಡುತ್ತವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಮುಂದಾಗಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚುವುದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯದಲ್ಲಿ ಸ್ವಲ್ಪ ಮುಟ್ಟಿನ ಏರುಪೇರಾದರೂ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಈ ನಿಟ್ಟಿನಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಕೆ.ಶ್ರೀನಿವಾಸ್ ಮಾರ್ಗದರ್ಶನದಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್, ಅಂಗನವಾಡಿ ಕಾರ್ಯಕರ್ತೆ ರೂಪಾ, ಸಹಾಯಕಿ ಪಂಕಜಾ, ಆಶಾ ಕಾರ್ಯಕರ್ತೆಯರಾದ ವಸುಂಧರಾ, ಸಿಂಧು, ಗ್ರಾಮಸ್ಥರಾದ ದ್ರಾಕ್ಷಾಯಿಣಿ ಇತರರಿದ್ದರು.