ಜಿಲ್ಲೆ

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಸಕಲೇಶಪುರ: ಭೂಮಿ ಮಂಜೂರಾತಿಗಾಗಿ ಸ್ಥಳ ಪರಿಶೀಲನೆ ನಡೆಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಹಣದ ಸಹಿತ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.


ಹೆತ್ತೂರು ನಾಡಕಚೇರಿ ಗ್ರಾಮ ಲೆಕ್ಕಾಧಿಕಾರಿ ಡಿ.ಆರ್. ಮೋಹನಕುಮಾರ್ ಬಂಧಿತ. ಹೆತ್ತೂರು ಹೋಬಳಿಯ ನಾಗೇಶ್ ಅವರ ಭೂಮಿ ಮಂಜೂರಾತಿ ಮಾಡಲು ಸ್ಥಳ ಪರಿಶೀಲನೆಗಾಗಿ 25 ಸಾವಿರ ರೂ.ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ರೈತ ನಾಗೇಶ್ ಕಚೇರಿಯಲ್ಲಿ ಹಣ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಸಮೇತ ಅಧಿಕಾರಿಯನ್ನು ಬಂಧಿಸಿದ್ದಾರೆ.


ದಾಳಿಯ ನೇತೃತ್ವವನ್ನು ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ವಹಿಸಿದ್ದರು.