ಜಿಲ್ಲೆ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದವನ ಬಂಧನ

ನಾಪೋಕ್ಲು: ಚೇಲಾವರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ.

ವಿರಾಜಪೇಟೆಯ ಲಾರಿ ಚಾಲಕ ಪಿ.ಎ ಸರ್ಪುದ್ದೀನ್(27) ಬಂಧಿತ. ಐನರಿಯಂದಡ ಕೇಂದ್ರ ಪ್ರೌಢಶಾಲಾ ರಸ್ತೆಯಲ್ಲಿರುವ ಬಸ್ ತಂಗುದಾಣದಲ್ಲಿ ಗುರುವಾರ ಪೊಲೀಸರು ಬಂಧಿಸಿದ್ದಾರೆ. 180 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.