ಚಾಮರಾಜನಗರ: ಗಾಂಜಾ ಸೇವನೆ ಮಾಡುವವರಿಗೆ ಮಾರಾಟ ಮಾಡಲು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ಸೆನ್ ಪೊಲೀಸರು ಬಂಧಿಸಿದ್ದಾರೆ.
ಹನೂರು ತಾಲೂಕಿನ ಜಿ.ಕೆ.ಹೊಸೂರು ಗ್ರಾಮದ ನಿವಾಸಿ ಚಂದ್ರಪ್ಪ (63) ಬಂಧನಕ್ಕೆ ಒಳಗಾದ ವ್ಯಕ್ತಿ. ಈತ ಪರಿಚಯಸ್ಥ ಮುಸ್ಲಿಂ ವ್ಯಕ್ತಿಯೊಬ್ಬರು ನೀಡಿದ ಒಣಗಾಂಜಾವನ್ನು ಮಾರಾಟ ಮಾಡಲು ತೆಗೆದುಕೊಂಡು ಬರುವಾಗ, ಸಂತೇಮರಹಳ್ಳಿ ರಸ್ತೆಯ ದೊಡ್ಡರಾಯಪೇಟೆ ವೃತ್ತದ ಸಮೀಪ ಸೆನ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 1 ಕೆಜಿ 964 ಗ್ರಾಂ ತೂಕದ ಅಂದಾಜು 90 ಸಾವಿರ ರೂ, ಬೆಲೆಬಾಳುವ ಒಣಗಾಂಜಾವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಚಾಮರಾಜನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.