ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಸಮೀ ಪವಿರುವ ಲೊಕ್ಕನಹಳ್ಳಿ ರಸ್ತೆ ಯಲ್ಲಿ ಅಕ್ರಮವಾಗಿ ಒಣಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬುಧ ವಾರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಬಂಧಿ ಸಿದ್ದಾರೆ.
ಮಧುವನಹಳ್ಳಿ ಗ್ರಾಮದ ನಿವಾಸಿ ನಟರಾಜು( 48) ಬಂಧಿತ ಆರೋಪಿ. ಈತ ಮಧುವನಹಳ್ಳಿ ಹೊರವಲಯದಲ್ಲಿರುವ ಲೊಕ್ಕ ನಹಳ್ಳಿ ರಸ್ತೆಯಲ್ಲಿ ನಡೆದು ಕೊಂಡು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸುಪ್ರೀತ್ ನೇತೃತ್ವದ ತಂಡ ದಾಳಿ ನಡೆಸಿದ್ದು. ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿ ತನಿಂದ ಬಳಿಯಿಂದ 560 ಗ್ರಾಂ. ತೂಕದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.