ಜಿಲ್ಲೆ

ಗಾಂಜಾ ಸಾಗಿಸುತ್ತಿದ್ದವನ ಬಂಧನ

ರಾಜಣ್ಣ

ಚಾಮರಾಜನಗರ: ವ್ಯಸನಿಗಳಿಗೆ ಒಣ ಗಾಂಜಾ ಸಾಗಿಸುತ್ತಿದ್ದವನನ್ನು ಶುಕ್ರವಾರ ಸೆನ್ ಪೊಲೀಸರು ಬಂಧಿಸಿದ್ದಾರೆ.

ಹನೂರು ತಾಲೂಕಿನ ಜಿ.ಕೆ.ಹೊಸೂರು ಗ್ರಾಮದ ನಿವಾಸಿ ಚಂದ್ರಪ್ಪ (63) ಬಂಧಿತ. ಈತ ಪರಿಚಯಸ್ಥ ಮುಸ್ಲಿಂ ವ್ಯಕ್ತಿಯೊಬ್ಬರು ನೀಡಿದ ಒಣ ಗಾಂಜಾವನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಸಂತೇಮರಹಳ್ಳಿ ರಸ್ತೆಯ ದೊಡ್ಡರಾಯಪೇಟೆ ವೃತ್ತದ ಸಮೀಪ ಸೆನ್ ಪೊಲೀಸರು ದಾಳಿ ನಡೆಸಿ 1ಕೆಜಿ 964 ಗ್ರಾಂ ತೂಕದ ಒಣ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಚಾಮರಾಜನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.