Gavel on desk. Isolated with good copy space. Dramatic lighting. 
ಜಿಲ್ಲೆ

ಗಾಂಜಾ ಸೊಪ್ಪು ಬೆಳೆದ ವ್ಯಕ್ತಿಗೆ 10ವರ್ಷ ಶಿಕ್ಷೆ

ಚಿತ್ರದುರ್ಗ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಗಿಡಗಳನ್ನು ಬೆಳೆದ ಆರೋಪಿ ತಾಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಯರ‍್ರಿಸ್ವಾಮಿಗೆ 10 ವರ್ಷ ಕಠಿಣ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.

ಆರೋಪಿ ತನ್ನ ಅಡಿಕೆ ತೋಟದಲ್ಲಿ 30.5 ಕೆ.ಜಿ ತೂಕದ ಹಸಿ ಗಾಂಜಾ ಸೊಪ್ಪು ಬೆಳೆದಿರುವುದನ್ನು ವಶಪಡಿಸಿಕೊಂಡು, ಎನ್‌ಡಿಪಿಎಸ್ ಕಾಯ್ದೆಯಡಿ ಚಿತ್ರದುರ್ಗ ಅಪರಾಧ ಪೊಲೀಸ್ ಠಾಣೆ ಸಿಇಎನ್‌ನಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರೈಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಗೀತಾ ಅವರು ಆರೋಪ ಸಾಬೀತಾದ ಕಾರಣ ಶಿಕ್ಷೆ, ದಂಡ ವಿಧಿಸಿದ್ದಾರೆ. ದಂಡ ಕಟ್ಟದಿದ್ದಲ್ಲಿ ಹೆಚ್ಚುವರಿಯಾಗಿ 10 ತಿಂಗಳು ಸಾದಾ ಶಿಕ್ಷೆ ವಿಧಿಸಿ, ಆದೇಶಿಸಿದ್ದಾರೆ. ಪ್ರಧಾನ ಸರ್ಕಾರಿ ಅಭಿಯೋಜಕ ಬಿ.ಗಣೇಶ ನಾಯ್ಕ ವಾದ ಮಂಡಿಸಿದ್ದರು.