ಜಿಲ್ಲೆ

ಗಾಂಧಿ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯ

ಚಿತ್ರದುರ್ಗ: ನಗರದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿ, ಪ್ರತಿ ವರ್ಷ ಗಾಂಧಿ ಜಯಂತಿ ಕಾರ್ಯಕ್ರಮ ಆಚರಿಸಬೇಕು ಎಂದು ಒತ್ತಾಯಿಸಿ ಕೆಕೆಎನ್‌ಎಸ್‌ಎಸ್ ಜಿಲ್ಲಾ ಅಧ್ಯಕ್ಷ ಗಣೇಶ್ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಯಾವುದೇ ಭಾಗದಲ್ಲೂ ಮಹಾತ್ಮಗಾಂಧಿ ಅವರ ಪ್ರತಿಮೆ ಇಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಸ್ಥಾಪಿಸಲು ಮುಂದಾಗಬೇಕು ಎಂದು ಕೋರಿದರು.