ಗಾಂಧಿ ಪುತ್ಥಳಿ  
ಜಿಲ್ಲೆ

ಗಾಂಧೀಜಿ ಪುತ್ಥಳಿ ಅನಾವರಣ ಇಂದು


ಚನ್ನರಾಯಪಟ್ಟಣ
: ತಾಲೂಕಿನ ದಿಡಗ ಗ್ರಾಮದ ಸರ್ಕಾರಿ ಫ್ರೌಢಶಾಲೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಮಹಾತ್ಮ ಗಾಂಧಿ ಪುತ್ಥಳಿಯ ಅನಾವರಣ ಹಾಗೂ ಸಂಸ್ಮರಣೆ ಸಮಾರಂಭ ಅ.3ರಂದು ನಡೆಯಲಿದೆ.


ಶ್ರೀ ಮಾತಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಚ್.ಎಂ.ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಸಿ.ಎನ್.ಬಾಲಕೃಷ್ಣ ಪುತ್ಥಳಿ ಅನಾವರಣಗೊಳಿಸಲಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ಎನ್. ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಜೆ. ಸೋಮನಾಥ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಆರ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.