ಜಿಲ್ಲೆ

ಗಾಣಗಾಪುರ ಸನ್ನತಿ ಮಳಖೇಡ ಅಭಿವೃದ್ಧಿ

ಕಲಬುರಗಿ
ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯನ ದೇವಸ್ಥಾನ ಕ್ಷೇತ್ರವನ್ನು ಹಾಗೂ ಚಿತ್ತಾಪುರ ತಾಲೂಕಿನ ಸನ್ನತಿಯ ಬೌದ್ಧ ಕೇಂದ್ರ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅಲ್ಲದೇ ಕಲಬುರಗಿ ಗುರುದ್ವಾರ ಸಮಗ್ರ ಅಭಿವೃದ್ಧಿ ಮಾಡಲಾಗುತ್ತದೆ. ಕಲಬುರಗಿ ಹಾಗೂ ಮಳಖೇಡ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕಲಬುರಗಿ ಸರ್ಕಾರಿ ವಸ್ತು ಸಂಗ್ರಹಾಲಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.