ಮೈಸೂರು: ಜಿಲ್ಲಾ ಗಾಣಿಗರ ಸಂಘದಿಂದ ಪುರಸ್ಕರಿಸಲು ಗಾಣಿಗ ಸಮುದಾಯದ ಪ್ರತಿಭಾನ್ವಿತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್.ಸಿ.ಉಮೇಶ್ ತಿಳಿಸಿದರು.
ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಜುಲೈನಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಸಚಿವರು, ಜನಪ್ರತಿನಿಧಿಗಳು, ಮುಖಂಡರ ಸಮ್ಮುಖದಲ್ಲಿ ಸನ್ಮಾನಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ, ಆಧಾರ ಪ್ರತಿಯೊಂದಿಗೆ ಜೂ.30ರ ಒಳಗೆ ಅಧ್ಯಕ್ಷರು/ಕಾರ್ಯದರ್ಶಿ, ಮೈಸೂರು ಜಿಲ್ಲಾ ಗಾಣಿಗರ ಸಂಘ, 6ನೇ ಮುಖ್ಯರಸ್ತೆ, ಗಾಣಿಗರ ವಿದ್ಯಾರ್ಥಿ ನಿಲಯ, ಸರಸ್ವತಿಪುರಂ, ಮೈಸೂರು. ಮೊ.9886028262 ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.
ಹಿಂದುಳಿದಿರುವ ಗಾಣಿಗ ಜನಾಂಗಕ್ಕೆ ಅನುಕೂಲ ಕಲ್ಪಿಸಲು ಗಾಣಿಗ ಅಭಿವೃದ್ಧಿ ನಿಗಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂ. ಅನುದಾನ ನೀಡಬೇಕು. ಸಮುದಾಯದ ಮುಖಂಡರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಉಪಾಧ್ಯಕ್ಷ ವಿ.ಕೃಷ್ಣಶೆಟ್ಟಿ, ನಿರ್ದೇಶಕರಾದ ವಿಜಯಕುಮಾರ್, ರಾಮದಾಸ್, ರವಿಕುಮಾರ್, ಶೈಲೇಶ್ ಇದ್ದರು.