ಮದ್ದೂರು: ಪಟ್ಟಣದಲ್ಲಿ ಇತ್ತೀಚೆಗೆ ಗಣೇಶನ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡ ವ್ಯಕ್ತಿಗಳ ಮನೆಗೆ ವಿಶ್ವಹಿಂದು ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಜರಂಗದಳದ ರಾಜ್ಯ ಸಂಚಾಲಕ ಗೋವರ್ಧನ್ ಸಿಂಗ್ ಮಾತನಾಡಿ, ಹಿಂದುಗಳ ಮೇಲೆ ಯಾರೇ ಹಲ್ಲೆ ಮಾಡಿದರು ಸಹಿಸುವ ಪ್ರಶ್ನೆಯೇ ಇಲ್ಲ. ಹಿಂದು ರಾಷ್ಟ್ರದಲ್ಲಿ ಹಿಂದುಗಳೇ ಸಾರ್ವಭೌಮತ್ವ ಸಾಧಿಸಬೇಕು. ಕಲ್ಲು ತೂರಾಟದಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆಗಳು ರಾಜ್ಯದಲ್ಲಿ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.
ಇದಕ್ಕೂ ಮುನ್ನ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಘಟನೆ ಕುರಿತು ಪೊಲೀಸರಿಂದ ಮಾಹಿತಿ ಸಂಗ್ರಹಿಸಿದರು. ಮುಖಂಡರಾದ ರಾಘವೇಂದ್ರ ಪುಣ್ಯಕೋಟಿ, ಪುನೀತ್ ಕುಮಾರ್, ರವಿ, ಸಾಗರ್, ಗುರುಮಲ್ಲೇಶ್, ಜಗನ್ನಾಥ್, ವೀರಭದ್ರಸ್ವಾಮಿ ಇದ್ದರು.