ಜಿಲ್ಲೆ

ಗುಂಡ್ಲುಪೇಟೆ ಜಿಟಿಟಿಸಿಯಲ್ಲಿ ಪ್ರವೇಶಾತಿ ಪ್ರಾರಂಭ

ಚಾಮರಾಜನಗರ: ಗುಂಡ್ಲುಪೇಟೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ತರಬೇತಿ ಕೇಂದ್ರದ ಪ್ರಾಂಶುಪಾಲ ಅನಿಲ್‌ಕುಮಾರ್ ತಿಳಿಸಿದರು.

ಜಿಟಿಟಿಸಿ ತರಬೇತಿ ಕೇಂದ್ರದಲ್ಲಿ ಪ್ರಮುಖವಾಗಿ ಡಿಪ್ಲೊಮ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೊಮ ಇನ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರನಿಕ್ಸ್ ಇಂಜಿನಿಯರಿಂಗ್ ಹಾಗೂ ಡಿಪ್ಲೊಮ ಇನ್ ಮೆಕಟ್ರಾನಿಕ್ಸ್ ಕೋರ್ಸ್‌ಗಳಿವೆ. ಎಸ್‌ಎಸ್‌ಎಲ್‌ಸಿ, ಐಟಿಐ ಹಾಗೂ ಪಿಯುಸಿ(ವಿಜ್ಞಾನ) ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೂರು ವರ್ಷಗಳ ಡಿಪ್ಲೊಮ ತರಬೇತಿಯ ನಂತರ ಕಡ್ಡಾಯವಾಗಿ ಒಂದು ವರ್ಷದ ಇಂಟರ್ನ್‌ಶ್ಿ ತರಬೇತಿ ನೀಡಲಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20 ಸಾವಿರದವರೆಗೆ ಶಷ್ಯ ವೇತನ ನೀಡಲಾಗುತ್ತದೆ. ತರಬೇತಿ ಬಳಿಕ ಕ್ಯಾಂಪಸ್ ಸೆಲೆಕ್ಷನ್ ಇರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲ ಮೇ 15 ಕೊನೆ ದಿನವಾಗಿದ್ದು, ಆಸಕ್ತರು ಆನ್‌ಲೈನ್ ಅಥವಾ ನೇರವಾಗಿ ಕಾಲೇಜಿಗೆ ಬಂದು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 8147384716 ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಗೋಷ್ಠಿಯಲ್ಲಿ ತರಬೇತಿ ಕೇಂದ್ರದ ಸುಭಾಷ್ ಚಂದ್ರು ಹಾಜರಿದ್ದರು.