ಚಿಕ್ಕಬಳ್ಳಾಪುರ : ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರತಂದಿರುವ ಅಭ್ಯಾಸ ವಿಶೇಷ ಕೈಪಿಡಿಯನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಆರ್.ಲತಾ ಬಿಡುಗಡೆಗೊಳಿಸಿದರು.
ಗುಣಮಟ್ಟದ ಶಿಕ್ಷಣ ಉತ್ತಮ ಭವಿಷ್ಯಕ್ಕೆ ಬುನಾದಿಯಾಗುತ್ತದೆ. ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದಿಸೆಯಲ್ಲಿ ಅಭ್ಯಾಸ ಕೈಪಿಡಿಯನ್ನು ಹೊರರಲಾಗಿದೆ. ಇದು ಅಂತಿಮ ಪರೀಕ್ಷೆಗೆ ಯೋಜಿತ ರೀತಿಯಲ್ಲಿ ಸನ್ನದ್ಧರಾಗಲು ಸಹಕಾರಿಯಾಗಿದ್ದು ಸಂಪನ್ಮೂಲ ಶಿಕ್ಷಕರ ಸಹಕಾರದೊಂದಿಗೆ ರಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಯರಾಮರೆಡ್ಡಿ ತಿಳಿಸಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲಾವಾರು ಪ್ರಥಮ ಸ್ಥಾನ ಪಡೆದು, ದಾಖಲೆ ಸೃಷ್ಟಿಸಿತು. ಉತ್ತಮ ಲಿತಾಂಶ ಪಡೆಯಲು ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳಿಗಾಗಿಯೇ ಹೊರ ತರಲಾದ ಎಲ್ಲ ವಿಷಯಗಳನ್ನೊಳಗೊಂಡ ಕೈಪಿಡಿ ಪ್ರಮುಖ ಕಾರಣವಾಗಿತ್ತು, ಈ ಸಾಲಿನಲ್ಲೂ ಹೊಸ ವಿಷಯಗಳೊಂದಿಗೆ ಕೈಪಿಡಿ ವಿತರಿಸಲಾಗುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮವಿಶ್ವಾಸ, ನಿರ್ಭಯವಾಗಿ ಪರೀಕ್ಷೆಯನ್ನು ಬರೆಯಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯಪಟ್ಟರು.
ಇಲಾಖೆ ಪರೀಕ್ಷೆ ಮುಂದೂಡಿಕೆ : ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ಹಿನ್ನೆಲೆಯಲ್ಲಿ ಏ.22 ರಿಂದ ಏ.30 ರವರೆಗೆ ನಡೆಯಬೇಕಿದ್ದು 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂಬರುವ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ ಪರೀಕ್ಷಾ ವೇಳಪಟ್ಟಿ ಪ್ರಕಟಿಸಲಾಗುವುದು ಎಂದು ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ತಿಳಿಸಿದ್ದಾರೆ.