ಜಿಲ್ಲೆ

ಗುರುನಾನಕ್ ಆಸ್ಪತ್ರೆ ಸಾಧನೆಗೆ ಮೆಚ್ಚುಗೆ

ಬೀದರ್: ಆಯುಷ್ಮಾನ್ ಭಾರತ-ಆರೋಗ್ಯ ಕನರ್ಾಟಕ ಯೋಜನೆ ಅನುಷ್ಠಾನದಲ್ಲಿ ನಗರದ ಗುರುನಾನಕ್ ಆಸ್ಪತ್ರೆ ಮೊದಲ ಸ್ಥಾನದಲ್ಲಿದೆ.

ಯೋಜನೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿ ಅರ್ಹ ಫಲಾನುಭವಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಸರ್ಕಾರದ ಮೆಚ್ಚುಗೆಗೆ ಪಾತ್ರವಾಗಿದೆ. ಯೋಜನೆಯಡಿ ಹೆಚ್ಚು ಜನರಿಗೆ ಆರೋಗ್ಯ ಸೇವೆ ಒದಗಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗಣರಾಜ್ಯೋತ್ಸವ ದಿನ ಗುರುನಾನಕ್ ಆಸ್ಪತ್ರೆಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದೆ.

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 1200 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 33 ಕೋವಿಡ್ ಪ್ರಕರಣ ಸೇರಿವೆ. ಚಿಕಿತ್ಸೆಗೆ ಒಳಗಾದವರಲ್ಲಿ ಹೆಚ್ಚಿನವರು ಬಿಪಿಎಲ್ ಪಡಿತರ ಚೀಟಿ ಹೊಂದಿದವರು. ಎಲ್ಲ ಪ್ರಕರಣಗಳಲ್ಲಿ ಅತ್ಯುತ್ತಮ ಗುಣಮಟ್ಟದ ಸ್ಟಂಟ್ ಅಳವಡಿಸಲಾಗಿದೆ ಎಂದು ಡಾ.ಸಂಜೀವರೆಡ್ಡಿ ತಿಳಿಸಿದ್ದಾರೆ.

ಡಯಾಲಿಸಿಸ್ ಉಚಿತ: ಆಸ್ಪತ್ರೆ ಚಿಕಿತ್ಸಾ ಸೌಲಭ್ಯಗಳಲ್ಲಿ ಇದೀಗ ಡಯಾಲಿಸಿಸ್ ಘಟಕ ಸಹ ಸೇರಿದೆ. ಇಲ್ಲಿನ ಜನರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಉಚಿತ ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ನೆಫ್ರಾಲಜಿಸ್ಟ್ ಡಾ.ಅನೀಲ ಮುದ್ದಾ ಹೇಳಿದ್ದಾರೆ.

ಡಿಎಚ್ಒ ಡಾ.ವಿ.ಜಿ. ರೆಡ್ಡಿ ಅವರು ಆಸ್ಪತ್ರೆ ಪ್ರಮುಖ ಸರ್ದಾರ್ ಪುನೀತ್ ಸಿಂಗ್ ಅವರಿಗೆ ಪ್ರಶಂಸಾ ಪ್ರಮಾಣಪತ್ರ ನೀಡಿ ಗೌರವಿಸಿದರು. ಡಾ.ಮಹೇಶ ಬಿರಾದಾರ, ಬ್ರಿಮ್ಸ್ ಅಧೀಕ್ಷಕ ಡಾ.ಶಿವಕುಮಾರ ಶೆಟಕಾರ ಇತರರಿದ್ದರು.