ಸಕಲೇಶಪುರ: ತಾಲೂಕಿನ ಜಾನೇಕೆರೆ ಗ್ರಾಮ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಗೊಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲೂಕಿನ ಹೊಸಳ್ಳಿ ಗ್ರಾಮದ ಜಗದೀರ್ಶ (51) ಮೃತಪಟ್ಟ ಸವಾರ. ಪಟ್ಟಣದಿಂದ ಮಂಗಳವಾರ ಗ್ರಾಮದ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಕುಳಿತ್ತಿದ್ದ ಜಗದೀಶ್ ಸ್ಥಳದಲ್ಲೇ ಮೃತಪಟ್ಟರೆ, ಸ್ಕೂಟರ್ ಚಾಲನೆ ಮಾಡುತ್ತಿದ್ದ ಮಗ ಪ್ರೀತಂ (21) ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿಗೆ ಸಾಗಿಸಲಾಗಿದೆ.
ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವರಸುದಾರರಿಗೆ ಹಸ್ತಾಂತರಿಸಲಾಗಿದೆ. ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.