ಜಿಲ್ಲೆ

ಗೃಹ ಸಚಿವ ಅಮಿತ್ ಷಾ ರಾಜೀನಾಮೆಗೆ ಆಗ್ರಹ

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ವಿಚಾರ ಮಂಚ್ ಸಂಘಟನೆ ರಾಜ್ಯಾಧ್ಯಕ್ಷ ಕೊಮಾರನಪುರ ಎಂ.ರಾಜಶೇಖರ್ ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಸಂಸತ್ತಿನಲ್ಲಿ ಮಾತನಾಡುವಾಗ ಅಮಿತ್ ಷಾ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿರುವುದು ಖಂಡನೀಯ, ಅವರು ಗೃಹ ಸಚಿವರಾಗಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಅದನ್ನು ಅವರು ಮರೆಯಬಾರದು. ಈ ಕೂಡಲೇ ಗೃಹ ಸಚಿವರು ರಾಜೀನಾಮೆ ನೀಡಿ ಎಲ್ಲರ ಸಮ್ಮುಖದಲ್ಲಿ ಕ್ಷಮೆ ಯಾಚಿಸಬೇಕು ಎಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಬಾಬು, ಜಿಲ್ಲಾ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ಗಣಿಗನೂರು ಚಿನ್ನಸ್ವಾಮಿ, ಯಳಂದೂರು ತಾಲೂಕು ಅಧ್ಯಕ್ಷ ಮಲಾರಪಾಳ್ಯ ಉಮೇಶ್, ಮುಖಂಡ ಅನಿಲ್ ಹಾಜರಿದ್ದರು.