ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಜಿಲ್ಲೆ

ಗೆಜ್ಜಲಗೆರೆ ವಸತಿ ಶಾಲೆ ಪರಿಶೀಲಿಸಿದ ಮಂಡ್ಯ ಎಡಿಸಿ

Mandya

ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಪರಿಸ್ಥಿತಿ ಅವಲೋಕನ ಮಾಡಿ, ವಿದ್ಯಾರ್ಥಿಗಳೊಟ್ಟಿಗೆ ಬೆರೆತು ಕಾಲ ಕಳೆದರು. ಸದ್ಯ ಬಾಡಿಗೆ ಕಟ್ಟಡದಲ್ಲಿ ಶಾಲೆ ನಡೆಯುತ್ತಿದ್ದು, ಮೇಲಧಿಕಾರಿಗಳು ಹಾಗೂ ಸರ್ಕಾರದ ಗಮನಕ್ಕೆ ತಂದು ಹೊಸ ಕಟ್ಟಡಕ್ಕೆ ಮುರಾರ್ಜಿ ಶಾಲೆ ಸ್ಥಳಾಂತರ ಮಾಡುವ ಭರವಸೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಮೂಲಕ ಎಡಿಸಿ ಡಾ.ಎಚ್.ಎಲ್. ನಾಗರಾಜು ಗಮನ ಸೆಳೆದರು.