ಜಿಲ್ಲೆ

ಗೈರಾಗುವ ಗಣತಿದಾರರ ವಿರುದ್ಧ ಕಠಿಣ ಕ್ರಮ

ಚಿತ್ರದುರ್ಗ: ಜಿಲ್ಲೆಯಲ್ಲಿ ಸೆ. 22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಗೈರಾಗುವ ಸಿಬ್ಬಂದಿ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಸಿದ್ದಾರೆ. ಚಿತ್ರದುರ್ಗ ತಾಲೂಕು ಕಚೇರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಶಿಕ್ಷಕರು ಗಣತಿಗೆ ಅಸಹಕಾರ ತೋರಿಸಬಾರದು. ಕೆಲವು ಗಣತಿದಾರರು ಸಮೀಕ್ಷಾ ಕಾರ್ಯದಲ್ಲಿ ಗೈರು ಹಾಜರಾಗುವುದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವ ದೂರುಗಳಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.