ಹಾಸನ: ಗೊರೂರು ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ನಾರಾಯಣ ಅವರ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ಮಾಡಿ ಪರಿಶೀಲನೆ ನಡೆಸಿದರು.
ಶನಿವಾರ ಮುಂಜಾನೆ 5 ಸಮಯದಲ್ಲಿ ಹಾಸನ ಲೋಕಾಯುಕ್ತರು ಗೊರೂರು ಪವರ್ ಹೌಸ್ ಕೆಪಿಟಿಸಿಎಲ್ ಇಂಜಿನಿಯರ್ ಆಗಿರುವ ನಾರಾಯಣ ಅವರ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿ ನೂತನವಾಗಿ ನಿರ್ಮಿಸಿರುವ ನಿವಾಸ ಹಾಗೂ ಕಚೇರಿ ಮೇಲೆ ಎಸ್‌ಪಿ ಮಲ್ಲಿಕ್, ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ನಾರಾಯಣ ಅವರು ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.