ಚಿತ್ರದುರ್ಗ: ಪ್ರಸಕ್ತ ರಾಜ್ಯಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವಂತೆ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಸಮಿತಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಘೋಷಿಸಿದಂತೆ 6ನೇ ಗ್ಯಾರೆಂಟಿಯಾಗಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಸಹಾಯಕಿಯರಿಗೆ 10 ಸಾವಿರ ರೂ.ಗೌರವ ಧನ ನೀಡಬೇಕು. ರಾಜ್ಯದಲ್ಲಿ 1.40 ಲಕ್ಷ ಅಂಗನವಾಡಿ ನೌಕರರು ಜೀವನ ಭದ್ರತೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಮಕ್ಕಳ ಲಾಲನೆ, ಪಾಲನೆ, ಶಾಲಾ ಪೂರ್ವ ಶಿಕ್ಷಣ ನೀಡುವುದು. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು ಒತ್ತಾಯಿಸಿದರು.
ಎಸ್. ಭಾಗ್ಯಮ್ಮ, ಜಮುನಾಬಾಯಿ, ಪಿ.ಕೆ. ವಿನೋದಮ್ಮ, ಎಂ. ಸಾವಿತ್ರಮ್ಮ, ರಾಧಮ್ಮ, ಇ. ಸತ್ಯಕೀರ್ತಿ ಇತರರು ಇದ್ದರು.