ಜಿಲ್ಲೆ

ಗೌರವ ನೀಡುವ ಪರಂಪರೆ ಬೆಳೆಸಿಕೊಳ್ಳಿ

ಸಿರಗುಪ್ಪ: ಸೈನಿಕರು, ರೈತರು ಹಾಗೂ ಕಾರ್ಮಿಕರ ಸೇವೆಯನ್ನು ಈಶ ಸೇವೆಯೆಂದು ಭಾವಿಸಿ ಅವರಿಗೆ ಗೌರವ ನೀಡುವ ಪರಂಪರೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ತಹಸೀಲ್ದಾರ್ ಗೌಸಿಯಾ ಬೇಗಂ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶಾಸಕ ಬಿ.ಎಂ.ನಾಗರಾಜ ಮಾತನಾಡಿ, ಅನೇಕ ಸವಾಲುಗಳ ನಡುವೆ ಸಿರಗುಪ್ಪ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ವಿದ್ಯಾರ್ಥಿಗಳ ತಂಡ ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶಿಸಿತು. ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿಪತ್ರ ನೀಡಲಾಯಿತು. ಕ್ರೀಡೆಗಳು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳು,ಪಥಸಂಚನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಅಂಗವಿಕಲರಿಗೆ ಶಾಸಕ ಬಿ.ಎಂ.ನಾಗರಾಜ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗುರಪ್ಪ, ಜಿಪಂ ಎಇಇ ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೆರು ಸಿದ್ದಯ್ಯ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಬಿ.ರಮೇಶ ಇತರರಿದ್ದರು.