ಜಿಲ್ಲೆ

ಗ್ಯಾರಂಟಿ ಅರ್ಹ ಫಲಾನುಭವಿಗಳಿಗೆ ನೀಡಿ

ಶಹಾಪುರ: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬುಧವಾರ ತಾಪಂ ಕಚೇರಿಯಲ್ಲಿ ಕರೆದಿದ್ದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಗಳು ಬಡ ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲೂಕು ಮಟ್ಟದ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಹೀಗಾಗಿ ಯಾವುದೇ ಲೋಪವಾಗದಂತೆ ಯೋಜನೆಗಳು ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅಧಿಕಾರಿಗಳಲ್ಲಿ ಸೇವಾ ಮನೋಭಾವ ಇರಬೇಕು. ಸಮಾಜದಲ್ಲಿ ಇನ್ನು ಅನೇಕರು ಅಗತ್ಯ ಮೂಲ ಸೌಲಭ್ಯಗಳಿಂದ ವಂಚಿತರಾಗಿz್ದÁರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಯಾವ ಕಾರಣಕ್ಕಾಗಿ ಸೌಲಭ್ಯ ದಕ್ಕುತ್ತಿಲ್ಲ. ಅದಕ್ಕಾಗಿ ಏನು ಮಾಡಬೇಕೆಂಬ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕೆಲಸ ಆಯಾ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ತಾಲೂಕಿನ ಬಿಪಿಎಲï ಹಾಗೂ ಎಪಿಎಲï ಕುಟುಂಬಗಳ ಯಜಮಾನಿ ಖಾತೆಗೆ ಮಾಸಿಕ ೨೦೦೦ ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆ ಸೌಲಭ್ಯ ಪಡೆಯಲು ಮಹಿಳೆಯರು ತಮ್ಮ ಕುಟುಂಬದ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ನೊಂದಿಗೆ ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಗೃಹ ಲಕ್ಷಿö್ಮಯೋಜನೆಯಡಿ ನೋಂದಾಯಿತ ಫಲಾನುಭವಿಗಳಲ್ಲಿ ಕೆಲವರಿಗೆ ವಿವಿಧ ಕಾರಣಗಳಿಂದ ಮಾಸಿಕ ಹಣ ವರ್ಗಾವಣೆಯಾಗಿಲ್ಲ, ಅಂತಹ ಫಲಾನುಭವಿಗಳ ಪಟ್ಟಿ ನೀಡಿ, ಸಮಸ್ಯೆಇತ್ಯರ್ಥಕ್ಕೆ ಸೂಕ್ತಕ್ರಮ ವಹಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆಯಡಿ ಶಹಾಪುರ ತಾಲೂಕಿನಲ್ಲಿ ಘಟಕದ¯್ಲೆ ೬೭.೫೮ಲP್ಷÀ ಮಹಿಳೆಯರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿದ್ದು. ಇದರಿಂದ ೨೮.೧೪ ಕೋಟಿ ರೂ. ಆದಾಯ ಬಂದಿದ್ದು, ಹೊಸದಾಗಿ ೨೭ ವಾಹನ ಸೇರ್ಪಡೆ ಮಾಡಲಾಗಿದೆ ಎಂದು ಸಾರಿಗೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಈ ವೇಳೆ ಶಹಾಪುರ ತಾಪಂ ಇಒ ಸೋಮಶೇಖರ ಬಿರದಾರ, ಸಹಾಯಕ ನಿರ್ದೇಶಕ ಭೀಮಣ್ಣಗೌಡ ಬಿರಾದಾರ, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಸದಸ್ಯ ಶರಣಗೌಡ ಅಣಬಿ, ರಮೇಶ ಗುರಿಕಾರ, ಬಸಣ್ಣಗೌಡ, ಮಲ್ಲಣ್ಣಗೌಡ ತಿಪ್ಪನಳ್ಳಿ, ಹುಸೇನ್ ಭಾಷಾ, ತಾಯಮ್ಮ, ಸಿದ್ದಣ್ಣ ದೇಸಾಯಿ ಹಾಗೂ ಮೌನೇಶ ಶಟ್ಟಿಕೇರಾ ಸಭೆಯಲ್ಲಿ ಭಾಗವಹಿಸಿದ್ದರು.

ಬಾಕ್ಸ್
೨೦೦ ಯುನಿಟ್‌ವರೆಗೆ ವಿದ್ಯುತ್ ಉಚಿತ
ಗೃಹಜ್ಯೋತಿ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿ ಕುಟುಂಬಕ್ಕೂ ಪ್ರತಿ ತಿಂಗಳು ೨೦೦ ಯುನಿಟ್‌ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಬಹಳಷ್ಟು ಗ್ರಾಹಕರು ೨೦೦ ಯುನಿಟ್ ಒಳಗೆ ವಿದ್ಯುತ್ ಬಳಕೆ ಮಾಡುತ್ತಿz್ದÁರೆ. ಗ್ರಾಮೀಣ ಭಾಗದ ಗ್ರಾಹಕರು ತಮ್ಮ ಮನೆಯಲ್ಲಿ ಮೀಟರ್ ಅಳವಡಿಸಿಕೊಂಡಿಲ್ಲ, ತಾಲೂಕಿನಲ್ಲಿ ೧೭ಸಾವಿರ ಫಲಾನುಭವಿಗಳಷ್ಟೆ ಮೀಟರ್ ಅಳವಡಿಸಿಕೊಂಡಿz್ದÁರೆ ಎಂದು ತಾಲೂಕು ಸಹಾಯಕ ಕಾರ್ಯಪಾಲಕ ಅಭಿಯಂತರರು ಮಾಹಿತಿ ನೀಡಿದರು.

ಬಾಕ್ಸ್
ಗ್ಯಾರಂಟಿ ಯೋಜನೆಯಿಂದ ವಂಚಿತರಾಗದಿರಿ
ತಾಲೂಕಿನಲ್ಲಿ ೫೮,೨೧೭ ಪಡಿತರ ಚೀಟಿಗಳಿದ್ದು, ೨,೩೦,೪೨೭ ಜನ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ೫ ಕೆಜಿ ಅಕ್ಕಿ ಜತೆಗೆ ಮಾಸಿಕ ಪ್ರತಿ ಫಲಾನುಭವಿಗೆ ೧೭೦ ರೂ. ಹಣ ನೇರ ನಗದು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಪಡಿತರ ಚೀಟಿ ನೋಂದಣಿ ನಿಯಮಾನುಸಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ನೋಂದಣಿಯಾಗಬೇಕು. ಯಾರೊಬ್ಬರೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು. ಸರ್ಕಾರದ ಜನಪರ ಯೋಜನೆಯ ಲಾಭ ಜನಸಾಮಾನ್ಯರಿಗೆ ನೀಡಬೇಕು.