ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಪಡಿಸುವಂತೆ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಿ.ಕೆ ರಂಗಸ್ವಾಮಿ ಅವರು ಸೂಚನೆ ನೀಡಿದರು.
ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಪ್ರತಿ ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಯ ಶಿಬಿರಗಳನ್ನು ಆಯೋಜಿಸಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಂದು- ಕೊರತೆಗಳ ಅಹವಾಲು ಸ್ವೀಕರಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಇದೆ ವೇಳೆ ಹಾಸನ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಡಿ. ಗಿರೀಶ್ ಹಾಗೂ ಹಾಸನ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.