ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಜು. 30ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ತಿಳಿಸಿದ್ದಾರೆ.