ಚಿತ್ರದುರ್ಗ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಬಹುದೊಡ್ಡ ಸಾಮಾಜಿಕ ಬದ ಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಭರವಸೆ ವ್ಯಕ್ತಪಡಿಸಿದರು. ನಗರದ ಸೈನ್ಸ್ ಕಾಲೇಜು ಮೈ ದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 77ನೇ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,ಗೌರವ ರಕ್ಷೆ ಸ್ವೀ ಕರಿಸಿ ಅವರು ಮಾತನಾಡಿದರು.
ಸರ್ವರಿಗೂ ಸಮಾನ ಅವಕಾಶಗಳು ದೊರೆತರೆ ದೇಶದ ಪ್ರಗತಿ ಸಾಧ್ಯ. ಸರ್ಕಾರದ ಐದು ಯೋಜನೆಗಳ ಜಾರಿಗೆ ಪವಾಡವಲ್ಲ. ರಾಜ್ಯದ ಸಂಪತ್ತನ್ನು ಹಂಚಿ,ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಪ್ರಯತ್ನವಾಗಿದೆ ಎಂದರು. ದೇಶದ ಸ್ವಾತಂತ್ರೃಕ್ಕಾಗಿ ಹೋರಾ ಟ,ಅವರ ಕೆಚ್ಚೆದೆಯೇ ಹೋರಾಟದ ಕಿಚ್ಚು ಚಿತ್ರದುರ್ಗ ಜಿಲ್ಲೆ ವ್ಯಾಪಿಸಿದ್ದನ್ನು ನೆನಪಿಸಿಕೊಂಡರು. ಆ.27ರಂದು ಬೆಳಗಾವಿಯಲ್ಲಿ ಗೃಹ ಲಕ್ಷ್ಮೀ ಯೋಜನೆ ಜಾರಿಯಾಗಲಿದೆ ಎಂದರು.
ನಗರದ ಕವಾಡಿಗರ ಹಟ್ಟಿಯಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು ಸಹಿತ ನಾನಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯಿಂದ ಅಲ್ಲಿಯ ವಸತಿ ರಹಿತರಿಗೆ ವಸತಿ ಸೌಕರ್ಯ ಒದಗಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಮಹಾದೇವಪ್ಪ ಅವರ ಬಳಿ ಚರ್ಚಿಸಿರುವುದಾಗಿ ತಿಳಿಸಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ,ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್,ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಎ. ಗೋವಿಂದಪ್ಪ,ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು,ಜಿಪಂ ಸಿಇಒ ಸೋಮಶೇಖರ್,ಎಸ್‌ಪಿ ಕೆ.ಪರಶುರಾಮ,ಅಪರ ಜಿಲ್ಲಾಧಿಕಾರಿ ಬಿ. ಟಿ.ಕುಮಾರಸ್ವಾಮಿ,ಉಪವಿಭಾಗಧಿಕಾರಿ ಎಂ.ಕಾರ್ತಿಕ್,ತಹಸೀಲ್ದಾರ್ ಡಾ.ನಾಗವೇಣಿ,ಡಿಎಚ್‌ಒ ಡಾ.ಆರ್.ರಂಗನಾಥ್,ಮಾಜಿ ಎಂ ಎಲ್‌ಸಿ ಜಯಮ್ಮ ಬಾಲರಾಜ್,ನಗರಸಭೆ ಆಯುಕ್ತ ಶ್ರೀನಿವಾಸ್,ಜಿಪಂ ಮಾಜಿ ಸದಸ್ಯರು,ನಗರಸಭೆ ಸದಸ್ಯರು ಮತ್ತಿತರ ಗಣ್ಯರು, ಅಧಿಕಾರಿಗಳು ಇದ್ದರು.
ಸಶಸ್ತ್ರ ಮೀಸಲು ಪಡೆ,ನಾಗರೀಕ ಪೊಲೀಸ್,ಗೃಹರಕ್ಷಕ ,ಅಬಕಾರಿ,ಅರಣ್ಯ ಇಲಾಖೆ ತುಕಡಿಗಳು ಎನ್‌ಸಿಸಿ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಾಗೂ ಪೊಲೀಸ್ ಬ್ಯಾಂಡ್ ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ನಂತರ ಕೋಟೆ ಸರ್ಕಾರಿ ಪ್ರೌಢಶಾಲೆ,ವಾಸವಿ ವಿದ್ಯಾಸಂಸ್ಥೆ ಹಾಗೂ ವಿದ್ಯಾವಿಕಾಸ್ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಆಕರ್ಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟರು.