ಯಾದಗಿರಿ: ರಾಜ್ಯದಲ್ಲಿ ನೂತನ ಸರಕಾರ ಜನತೆಯ ಆಶಿವರ್ಾದದಿಂದ ಅಸ್ತಿತ್ವಕ್ಕೆ ಬಂದಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಕೈಗೊಂಡಿರುವ ಕ್ರಮ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಭಿಪ್ರಾಯಪಟ್ಟರು.
ಮಂಗಳವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 77ನೇ ಸ್ವಾತಂತ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಜನತೆಗೆ ಶುಭ ಸಂದೇಶ ನೀಡಿ, ಚುನಾವಣೆಗೂ ಮುನ್ನ ನಾವು ಜನತೆಗೆ ನೀಡಿದ ಭರವಸೆಗಳನ್ನು ಅಕಾರಕ್ಕೆ ಬಂದ ತಕ್ಷಣ ಈಡೇರಿಸುವ ಕೆಲಸ ಮಾಡುತ್ತಿದ್ದೇವೆ. ನಾಡಿನಲ್ಲಿನ ಮಹಿಳೆಯ ಸಬಲೀಕರಣದ ಉದ್ದೇಶದಿಂದ ಇಂದು ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಜನ ಕಲ್ಯಾಣವೇ ಕಾಂಗ್ರೆಸ್ ಸಕರ್ಾರದ ಧ್ಯೇಯವಾಗಿದೆ ಎಂದು ತಿಳಿಸಿದರು.
ರಾಜ್ಯದ ಮಹಿಳೆಯರು ರಾಜ್ಯದಲ್ಲಿ ಉಚಿತವಾಗಿ ಪ್ರಯಾಣಿಸಲು ಸರಕಾರಿ ಬಸ್ಗಳಲ್ಲಿ ಉಚಿತ ಅವಕಾಶ ಕಲ್ಪಿಸಲಾಗಿದೆ. ಕಳೆದ ಜೂನ್ನಿಂದ ಇದುವರೆಗೂ ರಾಜ್ಯದಲ್ಲಿ ಒಟ್ಟು 37.50 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇದರಿಂದ 868.99 ಕೋಟಿ ರೂ. ಮಹಿಳಾ ಪ್ರಯಾಣಿಕರ ಟಿಕೇಟ್ ವೆಚ್ಚವಾಗಿರುತ್ತದೆ. ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 65 ಲಕ್ಷ ಮಹಿಳೆಯರು ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5ಕೆಜಿ ಆಹಾರಧಾನ್ಯದ ಜತೆಗೆ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 170 ರೂ. ನೇರ ನಗದು ವಗರ್ಾವಣೆ ಯೋಜನೆ ಜುಲೈ ತಿಂಗಳಿನಿಂದ ಪ್ರಾರಂಭವಾಗಿದೆ ಎಂದು ಸಕರ್ಾರದ ಸಾಧನೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.
ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ ಇಲ್ಲಿಯವರೆಗೆ ಮೊದಲ ಹಂತದಲ್ಲಿ 1,774 ಎಕರೆ ಜಮೀನನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗಿದ್ದು 332 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಸ್ತುತ 10 ಘಟಕಗಳು ಉತ್ಪಾದನೆ ಆರಂಭಗೊಳಿಸಿವೆ. ಇನ್ನೂ 30 ಘಟಕಗಳು ನಿಮರ್ಾಣ ಹಂತದಲ್ಲಿದ್ದು, 766 ಉದ್ಯೋಗ ಅವಕಾಶಗಳ ಬೇಡಿಕೆಯು ಬಂದಿದೆ. ಈ ಕೈಗಾರಿಕಾ ಪ್ರದೇಶದಲ್ಲಿ ಇತ್ತೀಚೆಗೆ 110 ಕೆ.ವಿ ಸಬ್ ಸ್ಟೇಷನ್ ಕಾಯರ್ಾರಂಭಗೊಂಡಿದೆ. ಕಡೇಚೂರು ಕೈಗಾರಿಕೆ ಪ್ರದೇಶದಲ್ಲಿ ಎಲ್ಲ ಮೂಲಭೂತ ಸೌಕರ್ಯ ಅಭಿವೃದ್ಧಿಯಾಗಿದೆ. ಎರಡನೇ ಹಂತದ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದರು.