ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಕುಂದಾಪುರದ ಆಡಳಿತ ಸೌಧದ ಕೋರ್ಟ್ ಹಾಲ್‌ನಲ್ಲಿ ಗುರುವಾರ ನಡೆಯಿತು. 
ಜಿಲ್ಲೆ

ಗ್ರಾ.ಪಂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

ಚಾಮರಾಜನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.

ಚಾಮರಾಜನಗರ ತಾಲೂಕಿನ ಕೆಂಪನಪುರ ಗ್ರಾಮಪಂಚಾಯಿತಿಯ ಸಿಂಗನಪುರ ಕ್ಷೇತ್ರ, ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮಪಂಚಾಯಿತಿಯ ಕೊಡಗಾಪುರ ಕ್ಷೇತ್ರ, ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯ ಟಿ. ಹೊಸೂರು ಕ್ಷೇತ್ರ, ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮಪಂಚಾಯಿತಿಯ ಅತ್ತಿಖಾನೆ ಕ್ಷೇತ್ರ, ಮಲೈ ಮಹದೇಶ್ವರಬೆಟ್ಟ ಗ್ರಾಮಪಂಚಾಯಿತಿಯ ಗೊರಸಾಣೆ ಕ್ಷೇತ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಿಗದಿಯಾಗಿದೆ.

ಮೇ 8ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸುವರು. ನಾಮಪತ್ರ ಸಲ್ಲಿಕೆಗೆ ಮೇ 14 ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನಾ ಕಾರ್ಯ ಮೇ 15ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 17 ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ 25 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಲಾಗುತ್ತದೆ. ಮರು ಮತದಾನ ಅವಶ್ಯವಿದ್ದರೆ ಮೇ 27ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವೆರೆಗೆ ಮತದಾನ ನಡೆಸಲಾಗುತ್ತದೆ. ಮೇ 28ರಂದು ಬೆಳಿಗ್ಗೆ 8 ಗಂಟೆಗೆ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಮೇ 28ರಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳಲ್ಲಿ ಮೇ 8 ರಿಂದ 28ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.