ಜಿಲ್ಲೆ

ಗ್ರಾಪಂ ಅಧ್ಯಕ್ಷರಾಗಿ ನವೀನ್‌ಕುಮಾರ್ ಅವಿರೋಧ ಆಯ್ಕೆ

ಅರಸೀಕೆರೆ: ತಾಲೂಕಿನ ಯಡವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನವೀನ್ ಕುಮಾರ್ ಅವಿರೋಧ ಆಯ್ಕೆಯಾದರು.


ಶಶಿಕುಮಾರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ನವೀನ್‌ಕುಮಾರ್ ಹೊರತುಪಡಿಸಿ ಬೇರ‌್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ತಾಪಂ ಇಒ ನಾಗರಾಜ್ ಅವಿರೋಧ ಆಯ್ಕೆ ಪ್ರಕಟಿಸಿದರು. ಬೆಂಗಲಿಗರು ಹಾಗೂ ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


ಉಪಾಧ್ಯಕ್ಷೆ ಚಂದ್ರಕಲಾ, ಜಿಪಂ ಮಾಜಿ ಸದಸ್ಯ ಬಾಣಾವರ ಅಶೋಕ್, ತಾಪಂ ಮಾಜಿ ಸದಸ್ಯರಾದ ಹೊಸೂರು ಗಂಗಾಧರ್, ಬಸವಲಿಂಗಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಕೆಂಪರಾಜು ಹಾಜರಿದ್ದರು.