ಜಿಲ್ಲಾಧಿಕಾರಿ ಜಾನಕಿ ಕೆ.ಎಂ 
ಜಿಲ್ಲೆ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

ಬಾಗಲಕೋಟೆ: ಜಿಲ್ಲೆಯಲ್ಲಿ ಅ.೨೬ ರಂದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಹಾಗೂ ಅ.೨೭ ರಂದು ಗ್ರಾಮ ಆಡಳಿತ ಅಽಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿಂದು ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದ ಅವರು, ಅ.೨೬ ರಂದು ಜರುಗಲಿರುವ ಕಡ್ಡಾಯ ಕನ್ನಡ ಪರೀಕ್ಷೆಗೆ ೬ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು ೨೬೮೩ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅ.೨೭ ರಂದು ನಡೆಯಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಜಿಲ್ಲೆಯಾದ್ಯಂತ ೪೮ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ೨೧೩೬೯ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಎರಡನೇ ದಿನವಾದ ಅ.೨೭ ರಂದು ಬಾಗಲಕೋಟೆಯಲ್ಲಿ ೧೭, ಇಳಕಲ್ಲ ೬, ಹುನಗುಂದ ೩, ಮುಧೋಳ ೫, ಜಮಖಂಡಿ ೧೪, ರಬಕವಿ-ಬನಹಟ್ಟಿ ೩ ಸೇರಿ ಒಟ್ಟು ೪೮ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಲು ಒಟ್ಟು ೪೮ ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೇ ೪೮ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಪರೀಕ್ಷೆಗೆ ವಸ್ತ್ರಸಂಹಿತೆ ಹಾಗೂ ವಿಶೇಷ ಸೂಚನೆಗಳನ್ನು ಸಹ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ವೈ.ಪಟ್ಟಣಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.