ಜಿಲ್ಲೆ

ಗ್ರಾಮ ಉತ್ಕರ್ಷ ಅಭಿಯಾನಕ್ಕೆ ಚಾಲನೆ

ಗುಂಡ್ಲುಪೇಟೆ: ತಾಲೂಕಿನ ಕೇಂದ್ರ ಸರ್ಕಾರದ ಪುರಸ್ಕೃತ ದರ್ತಿ ಆಬಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ 2024-26 ಯೋಜನೆಯಡಿ ಸೋಮನಪುರ, ತೊಂಡವಾಡಿ ಮತ್ತು ಮದ್ದೂರು ಗ್ರಾಮಗಳು ಆಯ್ಕೆಯಾಗಿದ್ದು, ತಾಲೂಕಿನ ಸೋಮನಪುರದಲ್ಲಿ ಸಮಾಜ ಕಲ್ಯಾಣ ಇಲಾಖೆ ಬುಧವಾರ ಅಭಿಯಾನಕ್ಕೆ ಚಾಲನೆ ದೊರೆಯಿತು.

ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಧಾರ್ ಕಾರ್ಡ್, ಜನಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ನೋಂದಣಿ ಮಾಡಲಾಯಿತು.

ಈ ಶಿಬಿರದಲ್ಲಿ ಕೊಡಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮಣಿ ಸದಸ್ಯರಾದ ಶ್ರೀನಿವಾಸ್ ಮತ್ತು ದೇವಮ್ಮ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮೋಹನ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತಾ, ಬ್ಯಾಂಕಿನ ಅಭಿಷೇಕ್ ಆರೋಗ್ಯ, ಕೃಷಿ, ಪಶುಸಂಗೋಪನೆ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.