ಸಾಲಿಗ್ರಾಮ: ಸದಸ್ಯರ ಮತ್ತು ಅಧಿಕಾರಿಗಳ ಸಹಕಾರ ಇದ್ದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಆಗಲು ಸಾಧ್ಯ. ಹೀಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಾಗಿ ಹನಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ಹೇಳಿದರು.
ಗ್ರಾಮ ಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಂತಹ ಕೆಲಸವನ್ನು ಗ್ರಾಪಂ ಮಾಡಲಿದೆ. ಇದಕ್ಕೆ ಸದಸ್ಯರ ಮತ್ತು ಅಧಿಕಾರಿಗಳು ಶ್ರಮ ಮುಖ್ಯವಾಗಿದೆ ಎಂದರು.
ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಹೆಚ್ಚು ಆದ್ಯತೆ ನೀಡಲಾಗುವುದು. ತುರ್ತಾಗಿ ಆಗಬೇಕಾದ ಕೆಲಸಗಳನ್ನು ಮಾಡಲು ಅಧಿಕಾರಿಗಳು ಮತ್ತು ಸದಸ್ಯರು ಮುಂದಾಗಬೇಕು. ನರೇಗಾ ಯೋಜನೆಯನ್ನು ಗ್ರಾಮಗಳ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಗ್ರಾಪಂ ಸದಸ್ಯರಾದ ಭಾಗ್ಯಾ, ಮಂಜುನಾಥ್, ಆಸಿಫ್‌ಖಾನ್, ರೂಪಾ, ಮಧುಸೂದನ್, ಲಕ್ಷ್ಮೀ, ವಿಶಾಲಾಕ್ಷಿ, ಪವಿತ್ರಾ, ಕಿರಣ್, ಧರ್ಮೇಶ್, ಜಯಮ್ಮ, ಪ್ರಭಾ, ರೇಣುಕೇಶ್, ಪಿಡಿಒ ಚಂದ್ರಶೇಖರ್ ಇದ್ದರು.