ಹೊಸನಗರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆ ಮಾಡಿದರೆ ಅಲ್ಲಿನ ಅವ್ಯವಸ್ಥೆ, ಕುಂದುಕೊರತೆ ನಿರ್ವಹಿಸಲು ಸಾಧ್ಯವಾಗುತ್ತದೆ. ಗ್ರಾಮ ಸಭೆಗೆ ಅಕಾರಿಗಳು ಖುದ್ದು ಹಾಜರಾಗುವಂತೆ ನೋಡಿಕೊಳ್ಳಬೇಕು. ಸಭೆಗೆ ಬಾರದ ಅಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಸಭೆಯಲ್ಲಿ ಮಾತ್ರ ಗ್ರಾಮೀಣ ಪ್ರದೇಶದ ಸಮಸ್ಯೆ ಕೇಳಲು ಸಾಧ್ಯ. ಆ ಸಭೆಗೆ ಅಕಾರಿಗಳು ಹೋಗದಿದ್ದರೆ ಸಮಸ್ಯೆಗಳ ನಿವಾರಣೆ ಅಸಾಧ್ಯ. ಸಭೆ ಕಡ್ಡಾಯವಾಗಿ ನಡೆಯಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಕಾರಿಗಳನ್ನು ಅಮಾನತು ಮಾಡಿ ಎಂದು ತಾಪಂ ಕಾರ್ಯನಿರ್ವಹಣಾಕಾರಿ ನರೇಂದ್ರಕುಮಾರ್‌ಗೆ ತಿಳಿಸಿದರು.
ಗ್ರಾಪಂನ 15ನೇ ಹಣಕಾಸು ಯೋಜನೆಯ ಅನುದಾನ ತಡೆಹಿಡಿಯದೆ ಕೂಡಲೇ ಹಣ ಬಿಡುಗಡೆ ಮಾಡಬೇಕು. ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಬಿಗಡಾಯಿಸಿದೆ. ಸಮಸ್ಯೆ ನಿವಾರಣೆಗೆ ಅಕಾರಿಗಳು ಗಮನ ನೀಡುತ್ತಿಲ್ಲ. ಕೂಡಲೇ ಹೆಚ್ಚಿನ ನಿಗಾವಹಿಸುವಂತೆ ಸೂಚಿಸಿದರು.
ಹೃದಯಾಘಾತದ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಜನಜಾಗೃತಿ ಆಗಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಯೋಜನೆ ರೂಪಿಸಬೇಕು. ರಿಪ್ಪನ್‌ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ವೈದ್ಯರ ಅವಶ್ಯಕತೆ ಇದೆ. ಇರುವ ಒಬ್ಬ ವೈದ್ಯರಿಂದ ಆಸ್ಪತ್ರೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮತ್ತೋರ್ವ ವೈದ್ಯರನ್ನು ನೇಮಕ ಮಾಡುವಂತೆ ಜಿಲ್ಲಾ ಆರೋಗ್ಯಾಕಾರಿಗಳ ಜತೆ ದೂರವಾಣಿ ಮೂಲಕ ಚರ್ಚಿಸಿದರು.
ಪಪಂ ಅಧ್ಯಕ್ಷ ನಾಗರಾಜ ರೆಡ್ಡಿ, ತಾಪಂ ಇಒ ನರೇಂದ್ರಕುಮಾರ್, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚಿದಂಬರ ಹೂವಿನಕೋಣೆ, ತಾಲೂಕಿನ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.