ಬೆಳಗಾವಿ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪತ್ರಕರ್ತರು ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್ಲೈನ್ ಅರ್ಜಿ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.