ಬಾಗಲಕೋಟೆ: ಜಿಲ್ಲೆಯ ಘಟಪ್ರಭಾ ನದಿಯ ಪಾತ್ರದಲ್ಲಿ ನೀರು ಕಡೆಮೆಯಾಗುತ್ತಿರುವ ಹಿನ್ನಲೆಯಲ್ಲಿ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ೩೫೦೦ ಕ್ಯೂಸೆಕ್ಸ್ ನೀರು ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಿಡಕಲ್ ಜಲಾಶಯದಿಂದ ಫೆಬ್ರವರಿ ೧೯ ರಂದು ನೀರು ಬಿಡುಗಡೆ ಮಾಡುವುದಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ. ನೀರು ಬಿಡುಗಡೆಯಾದಾಗ ಯಾವುದೇ ಕಾರಣಕ್ಕೂ ನದಿ ಪಾತ್ರದಲ್ಲಿ ಜಮೀನುಗಳಿಗೆ ನೀರು ಹರಿಸುವಂತಿಲ್ಲ. ಪ್ರಾರಂಭದಿAದ ಬಾಗಲಕೋಟೆ ತಾಲೂಕಿನ ಆನದಿನ್ನಿ ಬ್ಯಾರೇಜವರೆಗೆ ನೀರು ತಲುಪಬೇಕು. ಈ ಸಮಯದಲ್ಲಿ ಹೆಸ್ಕಾಂನವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿ. ಅಲ್ಲದೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಬಿಡುಗಡೆಯಾದ ನೀರನ್ನು ಸಂಗ್ರಹಣೆ ಮಾಡಿಕೊಳ್ಳಲು ಯೊಜನೆ ರೂಪಿಸಲು ಸೂಚಿಸಿದರು.
ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಮೊದಲು ಖಾಸಗಿ ಕೊಳವೆ ಬಾವಿಯಿಂದ ನೀರು ಪೂರೈಸಲು ಕ್ರಮವಹಿಸಿ, ಇಲ್ಲವಾದರೆ ಹೊಸ ಬೋರ್‌ವೆಲ್ ಕೊರೆಯಲು ಕ್ರೀಯಾ ಯೋಜನೆ ರೂಪಿಸಿ ಅನುಮೋದನೆ ಪಡೆಯಲು ತಿಳಿಸಿದರು. ಕೊಳವೆ ಬಾಯಿ ಇದ್ದು, ನೀರು ಬರೆದೇ ಇದ್ದಲ್ಲಿ ದುರಸ್ಥಿ ಮಾಡಿ ನೀರು ಬರುವಂತೆ ಮಾಡಬೇಕು. ಜುಲೈ ಮಾಹೆಯವರೆಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುನ್ನಚ್ಚರಿಕೆ ಕ್ರಮವಹಿಸಿ, ಈ ಬಗ್ಗೆ ಕ್ರೀಯಾ ಯೋಜನೆ ಮಾಡಿದಲ್ಲಿ ಮಾಹಿತಿ ನೀಡಲು ತಿಳಿಸಿದರು. ಗ್ರಾಮ ಪಂಚಾಯತ ಅಧಿಕಾರಿಗಳಿಂದ ಹಿಡಿದು ಎಲ್ಲ ಅಧಿಕಾರಿಗಳು ಕೆಲಸ ನಿರ್ವಹಿಸಲು ಸೂಚಿಸಿದರು.
ಫೆಬ್ರವರಿ ಮಾಹೆಯಲ್ಲಿ ಆಯಾ ತಾಲೂಕಿನಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ನಡೆಸಲಾದ ಟಾಸ್ಕಪೋರ್ಸ ಸಭೆಯ ವರದಿ ಸಲ್ಲಿಸಬೇಕು. ಕೃಷಿ, ತೋಟಗಾರಿಕೆ ಹಾಗೂ ರೆಷ್ಮೆ ಇಲಾಖೆಯವರು ಗುರುತಿಸಿರುವ ೧೧ ಎಕರೆ ಜಮೀನಿನಲ್ಲಿ ಮೇವು ಬೆಳೆಸಲು ಕ್ರಮವಹಿಸಲು ತಿಳಿಸಿದರು. ಜಿಲ್ಲೆಯಲ್ಲಿ ಮಾರ್ಚವರೆಗೂ ಕುಡಿಯುವ ನೀರಿನ ಸಮಸ್ಯೆ ಇರುವದಿಲ್ಲ. ಮುಂದೆ ತೊಂದರೆಯಾಗದAತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮವಹಿಸಲು ಸೂಚಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ ಕುಡಿಯುವ ನೀರಿಗಾಗಿ ಅವಶ್ಯಕತೆ ಇದ್ದಲ್ಲಿ ಮಾತ್ರ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈಗಾಗಲೇ ಕೊರೆದ ಬೋರ್‌ವೆಲ್‌ಗಳ ದುರಸ್ಥಿ ಕೈಗೊಂಡು ನೀಡಿದ ್ಲ ಪೈಪ್ ಹಾಗೂ ಮೋಟಾರ್ ಖರೀದಿಗೂ ಸಹ ಬಿಡುಗಡೆ ಮಾಡಿದ ಅನುದಾನದಲ್ಲಿ ಬಳಕೆ ಮಾಡುವಂತೆ ಗ್ರಾಮೀಣ ಕುಡಿಯುವ ನೀರಿಯ ಯೋಜನೆಯ ಸಹಾಯ ಕಾರ್ಯನಿರ್ವಾಹಕ ಅಭಿಯಂತರರಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸೇರಿದಂತೆ ಬರ ನಿರ್ವಹಣೆಗಾಗಿ ನೇಮಿಸಲಾದ ನೋಡಲ್ ಅಧಿಕಾರಿಗಳಾದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೋಳೆನ್ನವರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಗ್ರಾಮೀಣ ಕುಡಿಯುವ ನೀರು ಯೋಜನೆಯ ಮುಖ್ಯ ಅಭಿಯಂತರ ಪುರೋಹಿತ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಎಸ್.ಎಂ.ಕೋರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.