ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಕಲ್ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ 1.25 ಲಕ್ಷ ರೂ. ಮೌಲ್ಯದ ಸೀರೆ ಹಾಗೂ ಧೋತಿಗಳನ್ನು ವಶಕ್ಕೆ ಪಡೆದ ಚೆಕ್ ಪೋಸ್ಟ್ ಸಿಬ್ಬಂದಿ. 
ಜಿಲ್ಲೆ

ಚೆಕ್ ಪೋಸ್ಟ್ ನಲ್ಲಿ ಹಣ ಹಾಗೂ ಸೀರೆ ವಶ

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದ್ದು ಸೋಮವಾರ ಎರಡು ಚೆಕ್ ಪೋಸ್ಟ್ ಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ, ಸೀರೆ ಮತ್ತು ಧೋತಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಕಲ್‌ನಲ್ಲಿ ಸ್ಥಾಪಿಸಿರುವ ಚೆಕ್ಪೋಸ್ಟ್ ನಲ್ಲಿ ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.25 ಲಕ್ಷ ರೂ. ಮೌಲ್ಯದ ಸೀರೆಗಳು ಮತ್ತು ಧೋತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೊಂದು ಪ್ರಕರಣದಲ್ಲಿ ತರೀಕೆರೆ ತಾಲೂಕು ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎನ್. ಕ್ಯಾಂಪ್ನಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಯಾವುದೇ ದಾಖಲೆಯಿಲ್ಲದೆ ಬೈಕ್ನಲ್ಲಿ ಸಾಗಣೆ ಮಾಡುತ್ತಿದ್ದ 95 ಸಾವಿರ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹಣ ಹಾಗೂ ಸೀರೆಗಳು ಪತ್ತೆಯಾಗುತ್ತಿದ್ದಂತೆ ಇತರೆ ಚೆಕ್ ಪೋಸ್ಟ್ ಗಳಿಗೆ ಸೋಮವಾರ ಸಂಜೆ ವಿಕ್ರಂ ಅಮಟೆ ಅವರು ಭೇಟಿ ನೀಡಿ ಎಲ್ಲಾ ವಾಹನಗಳ ತಪಾಸಣೆ ನಡೆಸಬೇಕೆಂದು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.