ಚನ್ನಪಟ್ಟಣ: ಮುಂಬರುವ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ, ಆಕಾಂಕ್ಷಿಯೂ ನಾನಲ್ಲ. ನಾನು ಜನರ ಸಮಸ್ಯೆಯನ್ನು ಆಲಿಸಿ, ಉಪ ಚುನಾವಣೆಗೆ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಲು ಬಂದಿದ್ದೇನೆ ಎಂದು ನಿಖಿಲ್ ಸ್ಪಷ್ಟಪಡಿಸಿದರು.
ಕ್ಷೇತ್ರದ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದ ಮೂರು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರ ಎಚ್.ಡಿ ಕುಮಾರಸ್ವಾಮಿ ಅವರ ಸ್ವ ಕ್ಷೇತ್ರ. ತಾಲೂಕಿನ ಹಲವಾರು ಕೆರೆಗಳು ಖಾಲಿ ಇವೆ. ಜತೆಗೆ, ಹಲವಾರು ಸಮಸ್ಯೆಗಳಿವೆ. ಹೀಗಾಗಿ, ಜನರ ಸಮಸ್ಯೆ ಆಲಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಅಲ್ಲದೇ ಉಪ ಚುನಾವಣೆ ಬಗ್ಗೆ ಮುಖಂಡರ ಜತೆ ಚರ್ಚೆ ಮಾಡಲು ಸಹ ಬಂದಿದ್ದೇನೆ ಎಂದರು.
ನನಗೆ ಶಾಸಕನಾಗಬೇಕು, ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎಂಬ ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ದೇವೇಗೌಡರು ನಮ್ಮ ಪ್ರಾದೇಶಿಕ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಇದನ್ನು ಕುಮಾರಣ್ಣ ಉಳಿಸಿಕೊಂಡು ಬೇಳೆಸಿಕೊಂಡು ಹೋಗುತ್ತಿದ್ದಾರೆ. ನಾನು ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆರಂಭಿಸಿದ್ದೇನೆ. ನಿಖಿಲ್ ಕುಮಾರಸ್ವಾಮಿ ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ ಅಂತ ನನ್ನ ಮೇಲೆ ಸ್ಪರ್ಧೆಗೆ ಸಾಕಷ್ಟು ಒತ್ತಡ ಇತ್ತು. ಆದರೆ, ನಾನು ಚುನಾವಣೆಗೆ ಸ್ಪರ್ಧೆ ಮಾಡೊ ಸೂಕ್ತ ಸಮಯ ಅಲ್ಲ. ರಾಜ್ಯಾಧ್ಯಂತ ಕಾರ್ಯಕರ್ತರ ಜೊತೆ ಒಡನಾಟ ಬೆಳೆಸಿಕೊಳ್ಳಬೇಕು ಅಂತ ಕೆಲಸ ಆರಂಭಿಸಿದ್ದೇನೆ. ನಾನು ಯಾವುದೇ ಆಕಾಂಕ್ಷಿ ಅಲ್ಲ, ಅಪೇಕ್ಷೆಯೂ ಇಲ್ಲ.
ಏನಾದರೂ ಜನತಾದಳದ ಚಿನ್ಹೆ ಅಡಿ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಅನ್ನೊ ಸಂದರ್ಭ ಬಂದರೆ ನೂರಕ್ಕೆ ನೂರರಷ್ಟು ನಮ್ಮ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಘೋಷಿಸಿದರು.
ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವಾಗಬೇಕು. ಹೀಗಾಗಿ, ತಳಮಟ್ಟದಿಂದ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಚನ್ನಪಟ್ಟಣ ಕ್ಚೇತ್ರಕ್ಕೆ ಸಂಬಂಧಿಸಿದಂತೆ ವರದಿ ಸಿದ್ದಪಡಿಸಿದ್ದೇವೆ. ಆ ವರದಿಯನ್ನ ಬಿಜೆಪಿ ರಾಷ್ಟ್ರೀಯ ನಾಯಕರ ಗಮನಕ್ಕೆ ಕುಮಾರಸ್ವಾಮಿ ತರುತ್ತಾರೆ. ಯೋಗೇಶ್ವರ್ ರವರು ಸದ್ಯ ಬಿಜೆಪಿಯಲ್ಲಿ ಎಂಎಲ್‌ಸಿ ಇದ್ದಾರೆ. ಯೋಗೇಶ್ವರ್ ಅಥವಾ ಕುಮಾರಸ್ವಾಮಿ ಆಗಲಿ ಯಾವುದೇ ಅಪಸ್ವರಕ್ಕೆ ದಾರಿ ಮಾಡಿಕೊಟ್ಟಿಲ್ಲ. ಅಂತಿಮ ತಿರ್ಮಾನ ದೆಹಲಿಮಟ್ಟದಲ್ಲಿ ತಿರ್ಮಾನ ಆಗುತ್ತೆ. ಎಲ್ಲಾ ವಿಚಾರಗಳಿಗೂ ತಲೆ ಭಾಗಿ ಒಳ್ಳೆಯ ತಿರ್ಮಾನಕ್ಕೆ ಬರುತ್ತೇವೆ. ಯೋಗೇಶ್ವರ್ ಅವರನ್ನೂ ಕೂಡ ವಿಶ್ವಾಸವಾಗಿ ತೆಗೆದುಕೊಳ್ಳುತ್ತೇವೆ ಎಂದರು.