ಬಾಗಲಕೋಟೆ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯವು ಇಲ್ಲಿನ ಚರಂತಿಮಠದ ಪ್ರಭು ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದ್ದು, ಬಾಗಲಕೋಟೆ ನಗರದಲ್ಲಿ ಸಂತಸ ಮನೆ ಮಾಡಿದೆ.
ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಕೃಷಿ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಿಗೆ ತಮ್ಮದೇ ಆದ ರೀತಿಯಲ್ಲಿ ವಿಶೇಷ ವಿಶಿಷ್ಠ ಸೇವೆ ಸಲ್ಲಿಸಿ, ಸಾರ್ವಜನಿಕರ ಭಕ್ತಿ ಗೌರವ ಆದರಗಳಿಗೆ ಪಾತ್ರರಾಗಿರುವ, ಪ್ರಸಿದ್ಧ ದಾಸೋಹಮಠವಾಗಿರುವ ನೀಡಸೋಸಿಯ ಸಿದ್ಧಸಂಸ್ಥಾನಮಠದ ಅಽಪತಿಗಳು ಮತ್ತು ಬಾಗಲಕೋಟೆ ಚರಂತಿಮಠ ಮಠಾಽÃಶರಾಗಿ, ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾಗಿದೆ. ಸದಕಾಲ ಸಮಾಜದ ಒಳಿಗಾಗಿ ಚಿಂತನೆ ಮಾಡುತ್ತಾ ಸೇವೆ ಮಾಡುತ್ತಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀಡಿರುವ ಗೌರವ ಡಾಕ್ಟರೇಟ ಪದವಿಯಿಂದ ಖುಷಿಯಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ತಿಳಿಸಿz್ದÁರೆ.