ಭಾಲ್ಕಿ: ತಾಲೂಕಿನ ಚಳಕಾಪುರ ಗ್ರಾಮ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕ್ರಮವಾಗಿ ಶ್ರೀಮಂತ ಕಲ್ಲೂರ ಮತ್ತು ಸುರೇಖಾ ಹಣಮಂತ ಅವಿರೋಧ ಆಯ್ಕೆಯಾಗಿದ್ದಾರೆ.
ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆ ಆಗಿದ್ದರಿಂದ ಚುನಾವಣೆ ಅಧಿಕಾರಿಯಾದ ಬಿಇಒ ಮಹಜರ್ ಹುಸೇನ್ ಅವಿರೋಧ ಆಯ್ಕೆ ಘೋಷಿಸಿದರು.
ಚುನಾವಣೆ ನಂತರ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಿದ ಪ್ರಾಥಮಿಕ ಸಹಕಾರ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಭಾಲ್ಕಿ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಮಾರ್ಗದರ್ಶನದಲ್ಲಿ ಅವಿರೋಧ ಆಯ್ಕೆ ನಡೆದಿದೆ. ಗ್ರಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳ ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಶ್ರಮಿಸಬೇಕು. ಎಲ್ಲ ಸದಸ್ಯರು ಇವರಿಗೆ ಸಹಕಾರ ನೀಡಬೇಕು ಎಂದು ಕೋರಿದರು.
ಮುಖಂಡರಾದ ನಿಸಾರ್ ಅಹ್ಮದ್, ಮಯೂಮುದ್ ಖಾನ್, ಜಗನ್ನಾಥ ಕೊಳಾರೆ, ಶಿವರಾಜ ಮಾಸಲದಾರ್, ಮಹಾಲಿಂಗಯ್ಯ ಸ್ವಾಮಿ, ಶ್ರೀನಿವಾಸ ಚನ್ನಾಳೆ ಹಾಗೂ ಗ್ರಾಪಂ ಸದಸ್ಯರು ಇದ್ದರು.