ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯ ಆವರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಹಾಗೂ ಸ್ವಸಹಾಯ ಸಂಘದ ಸದಸ್ಯರು ಸ್ವಚ್ಛಗೊಳಿಸಿದರು. 
ಜಿಲ್ಲೆ

ಚಾಮುಂಡೇಶ್ವರಿ, ಮುತ್ತಪ್ಪ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

Kodagu

ಸುಂಟಿಕೊಪ್ಪ: ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದ್ದೆಹಳ್ಳ ಒಕ್ಕೂಟ ಹಾಗೂ ಸ್ವಸಹಾಯ ಸಂಘದ ಸದಸ್ಯರು ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯ ಆವರಣವನ್ನು ಸ್ವಚ್ಛಗೊಳಿಸಿದರು.

ಯೋಜನೆಯ ಮೇಲ್ವಿಚಾರಕಿ ಭವ್ಯಾ, ಸೇವಾ ಪ್ರತಿನಿಧಿ ಜ್ಯೋತಿ ವಾಸು, ಗದ್ದೆಹಳ್ಳದ ಒಕ್ಕೂಟದ ಉಪಾಧ್ಯಕ್ಷ ಆನಂದ ಹಾಗೂ ಶ್ರೀ ಮುತ್ತಪ್ಪ ದೇವಸ್ಥಾನದ ಅರ್ಚಕ ಶಿವಮಣಿ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.

ಸುಂಟಿಕೊಪ್ಪ, ಗದ್ದೆಹಳ್ಳ ಹಾಗೂ ನಾರ್ಗಾಣೆ, ವಿಭಾಗದ ಸ್ವಸಹಾಯ ಸಂಘದ ಸದಸ್ಯರು ಶ್ರೀರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು.