ಚಾಮರಾಜನಗರ: ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ(ಚಾಮುಲ್) ಅಧ್ಯಕ್ಷರಾಗಿ ಮಧುವನಹಳ್ಳಿ ನಂಜುಂಡಸ್ವಾಮಿ ಆಯ್ಕೆಯಾದರು.
ಈ ಹಿಂದಿನ ಅಧ್ಯಕ್ಷ ನಾಗೇಂದ್ರ ಅವರ ಪದಚ್ಯುತಿ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಕುದೇರು ಗ್ರಾಮದ ಬಳಿ ಇರುವ ಚಾಮುಲ್ ಕಚೇರಿ ಸಭಾಂಗಣಲದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಮಧುವನಹಳ್ಳಿ ನಂಜುಂಡಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.