ಮಧುಗಿರಿ: ಕೆಎಸ್ಆರ್ಟಿಸಿ ಬಸ್ ಚಾಲನೆ ಸಂದರ್ಭದಲ್ಲೇ ಚಾಲಕನಿಗೆ ಮೂರ್ಛೆ (ಫಿಟ್ಸ್) ಬಂದ ಹಿನ್ನೆಲೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನೆಲ ಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ ಬಸ್ ಡಿ.25ರಂದು ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮಡಕಶಿರಾ ಪಟ್ಟಣದ ಮಾರುತಿ ನಗರದ ಬಳಿ ಚಾಲಕನಿಗೆ ಫಿಟ್ಸ್ ಬಂದಿದೆ. ಈ ವೇಲೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದು, ಒಂದು ಗೂಡ್ಸ್ ಆಟೋ ಮತ್ತು ಬೈಕ್ಗೆ ಡಿಕ್ಕಿಯಾಗಿದೆ. ಬಸ್ ಡಿಕ್ಕಿ ಹೊಡೆಯಾಗಿ ರೈತ ನಾರಾಯಣ ಅವರ ತಲೆಗೆ ತೀವ್ರವಾಗಿ ಗಾಯವಾಗಿದ್ದು ನಾಲ್ಕು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಡಕಶಿರಾ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಬಸ್ ವಶಕ್ಕೆ ಪಡೆದಿದ್ದಾರೆ.